


ಡೈಲಿ ವಾರ್ತೆ: 23/ಜುಲೈ/2025


ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯದಳ ದೌಡು

ಬೆಂಗಳೂರು: ನಗರದ ಕಲಾಸಿಪಾಳ್ಯ ಬಿಎಂಟಿಸಿ ಬಸ್
ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಬಳಿ ಇಡಲಾಗಿದ್ದ ಬ್ಯಾಗ್‌ವೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆ ಆಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ ಪತ್ತೆಯಾಗಿದೆ. ಸ್ಥಳಕ್ಕೆ ಕಲಾಸಿಪಾಳ್ಯ ಠಾಣೆಯ ಪೊಲೀಸರು, ಬಾಂಬ್ ತಪಾಸಣೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.