ಡೈಲಿ ವಾರ್ತೆ: 24/ಜುಲೈ/2025

ಆನಂದಪುರ| ಕೆಎಸ್ಆರ್ ಟಿಸಿ ಬಸ್ ಹಾಗೂ ಗೂಡ್ಸ್‌ ಕಂಟೈನರ್ ಲಾರಿ ಮುಖಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ, ಚಾಲಕ ಸೇರಿ ನಾಲ್ವರ ಸ್ಥಿತಿ ಗಂಭೀರ!

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಸಾಗರ ರಸ್ತೆಯ ಮುಂಬಾಳ್‌ ತಿರುವಿನಲ್ಲಿ ಕೆಎಸ್ಆರ್ ಟಿಸಿ ಬಸ್ ಹಾಗೂ ಗೂಡ್ಸ್‌ ಕಂಟೈನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗೊಂಡ ಘಟನೆ ಜು.24 ರಂದು ಗುರುವಾರ ಬೆಳಗ್ಗೆ ಸಂಭವಿಸದೆ.

ಸಾಗರದಿಂದ ಶಿವಮೊಗ್ಗಕ್ಕೆ ತೆರುಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್‌ ಆನಂದಪುರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಗೂಡ್ಸ್‌ ಕಂಟೈನರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಬಸ್ ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕಳುಹಿಸಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಕೆಎಸ್ಆರ್ ಟಿಸಿ ಬಸ್ನಲ್ಲಿ ಸಾಗರದಿಂದ ಶಿವಮೊಗ್ಗ ಕಾಲೇಜಿಗೆ ತೆರಳುವಂತಹ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಎಲ್ಲರೂ ಗಾಯಗೊಂಡಿದ್ದಾರೆ. ಗಾಯಗೊಂಡವರು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಗಿದೆ.

ಘಟನೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು ಬಳಿಕ ಆನಂದಪುರ ಠಾಣೆಯ ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.