


ಡೈಲಿ ವಾರ್ತೆ: 24/ಜುಲೈ/2025


ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ(ರಿ.)
ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ವಿಜಯ ಕರ್ನಾಟಕ ಪರಿಸರ ಜಾಗೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ

ಕುಂದಾಪುರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಜಯ ಕರ್ನಾಟಕ ದಿನಪತ್ರಿಕೆಯು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೊಂದಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ ಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶರಧಿ ಎಸ್. ಅತ್ಯುತ್ತಮ ನಿರ್ವಹಣೆಯಿಂದ ಪ್ರಥಮ ಸ್ಥಾನ ಪಡೆದಿದ್ದಾಳೆ.
ಜುಲೈ 6 ರಂದು ಉಡುಪಿ ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ನಡೆದ, ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸುವ ಚಿತ್ರವನ್ನು ಚಿತ್ರಿಸಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶರಧಿ ಎಸ್. ಪ್ರಥಮ ಸ್ಥಾನ ಪಡೆದು ಸರ್ವರ ಪ್ರಶಂಸೆಗೆ ಪಾತ್ರಳಾಗಿದ್ದಾಳೆ.
ಅತ್ಯುತ್ತಮ ಸಾಧನೆಯಿಂದ ಈಗಾಗಲೇ ರಾಜ್ಯದ ಗಮನ ಸೆಳೆದಿರುವ ವಿದ್ಯಾರಣ್ಯ ಸಂಸ್ಥೆಯಲ್ಲಿ ನಿರಂತರವಾಗಿ ನಡೆಯುವ ತರಬೇತಿ ಕಾರ್ಯಕ್ರಮಗಳು ಮತ್ತು ಪ್ರತಿ ಎರಡು ವಾರಗಳಿಗೊಮ್ಮೆ ನಡೆಯುವ ಪಠ್ಯೇತರ ಚಟುವಟಿಕೆಗಳು ಈ ಉತ್ಕೃಷ್ಟ ಸಾಧನೆಗೆ ಸಹಕಾರಿಯಾಗಿದೆ. ಅತ್ಯುತ್ತಮ ಸಾಧನೆ ಮೆರೆದಿರುವ ವಿದ್ಯಾರ್ಥಿನಿಗೆ ಸಂಸ್ಥೆಯ ಚಿತ್ರಕಲಾ ಶಿಕ್ಷಕ ಗಿರೀಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿನಿಯ ಈ ಗಮನೀಯ ಸಾಧನೆಯನ್ನು ಶ್ಲಾಘಿಸಿ ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ.,ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.