ಡೈಲಿ ವಾರ್ತೆ: 24/ಜುಲೈ/2025

ಭಾರೀ ಮಳೆ ಹಿನ್ನೆಲೆ: ನಾಳೆ (ಜು. 25) ದ.ಕ.ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.