ಡೈಲಿ ವಾರ್ತೆ: 25/ಜುಲೈ/2025

ಗ್ರಾ.ಅ. & ಪಂ.ರಾಜ್ ಇಲಾಖೆಯ ಪ.ಜಾ, ಪ.ಪಂ.ಗಳ ಅಧಿಕಾರಿಗಳು & ನೌಕರರ ರಾಜ್ಯ ಮಟ್ಟದ ಸಮಾವೇಶ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ SC/ST ಅಧಿಕಾರಿಗಳು ಮತ್ತು ನೌಕರರ ರಾಜ್ಯ ಮಟ್ಟದ ಸಮಾವೇಶ ನಾಳೆ ಶನಿವಾರ ಬೆಳಿಗ್ಗೆ 10:30 ಕ್ಕೆ ಮೈಸೂರಿನ ಮಾನಸ ಗಂಗೊತ್ರಿಯ ಸೆನೆಟ್ ಭವನದಲ್ಲಿ ಆಯೋಜಿಸಲಾಗಿದೆ ಎಂಬುದಾಗಿ ಸಂಘದ
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ.ಶಿವರಾಜು.ಎಂ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

● ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧಿಕಾರಿಗಳು ಮತ್ತು ನೌಕರರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅವರ ಕಲ್ಯಾಣಕ್ಕಾಗಿ ಶ್ರಮಿಸುವುದು.

● ಸಮುದಾಯದ ಅಧಿಕಾರಿಗಳು & ನೌಕರರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮತ್ತು ವೈಚಾರಿಕ ಪ್ರಜ್ಞೆ ಮೂಡಿಸುವುದು.

● ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗಾಗಿ ಸಂಘಟಿತ ಹೋರಾಟವನ್ನು ರೂಪಿಸುವುದು.
●ಅಧಿಕಾರಿಗಳು ಮತ್ತು ನೌಕರರು ಎದುರಿಸುತ್ತಿರುವ ವೃತ್ತಿಪರ ಸಮಸ್ಯೆಗಳು, ಜೇಷ್ಠತಾ ಪಟ್ಟಿ, ರೋಷ್ಟರ್ ನಿಯಮ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಚನಾತ್ಮಕ ಕಾರ್ಯಕ್ರಮ ರೂಪಿಸಿ ಸರ್ಕಾರದ ಗಮನ ಸೆಳೆಯುವುದು: ಸರ್ಕಾರದ ಗಮನಕ್ಕೆ ತರುವ ಮೂಲಕ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುವುದು.
ಸಮುದಾಯದ ಸಮಗ್ರ ಅಭಿವೃದ್ಧಿಗೆ ಕಾರ್ಯತಂತ್ರಗಳನ್ನು ರೂಪಿಸುವುದು.

ಈ ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾವಿರಾರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧಿಕಾರಿಗಳು ಮತ್ತು ನೌಕರರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಸಮಾವೇಶವು ಸಮಾಜಮುಖಿ ಚಿಂತನೆಗಳನ್ನು ಮತ್ತು ಸಮುದಾಯದ ಏಳಿಗೆಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳಲಿದೆ.

●ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಗಳು, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಮತ್ತು ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂಬುದಾಗಿ ಶ್ರೀ.ಶಿವರಾಜು.ಎಂ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.