


ಡೈಲಿ ವಾರ್ತೆ: 25/ಜುಲೈ/2025


ಬ್ರಹ್ಮಾವರ ಪತ್ರಕರ್ತರ ಸಂಘದ ಪತ್ರಿಕಾದಿನದ ಪುರಸ್ಕಾರಕ್ಕೆ ಪೇತ್ರಿ ಭಾಸ್ಕರ್ ರಾವ್ ಆಯ್ಕೆ

ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಬ್ರಹ್ಮಾವರ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನದ ಪುರಸ್ಕಾರ ಕಾರ್ಯಕ್ರಮ ಜು. 26 ರಂದು
ಮಣೂರು-ಪಡುಕರೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 10.45ರಿಂದ ಜರಗಲಿದೆ.
ಪತ್ರಿಕಾ ದಿನಾಚರಣೆ ಪ್ರಯುಕ್ತ ಕೊಡ ಮಾಡುವ 2025ನೇ ಸಾಲಿನ ಪತ್ರಿಕಾ ದಿನಾಚರಣೆ ಪುರಸ್ಕಾರಕ್ಕೆ ಹಿರಿಯ ಪತ್ರಕರ್ತ, ಉದಯವಾಣಿ ಪತ್ರಿಕೆಯಲ್ಲಿ ದೀರ್ಘಕಾಲ
ವರದಿಗಾರರರಾಗಿ ಸೇವೆ ಸಲ್ಲಿಸಿದ ಪೇತ್ರಿ ಭಾಸ್ಕರ ರಾವ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಯು.ಎಸ್. ಶೆಣೈ ಅವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಗುವುದು. ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬ್ರಹ್ಮಾವರ
ತಾಲೂಕು ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಧ್ಯಕ್ಷತೆ ವಹಿಸಲಿದ್ದಾರೆ.
ಉದಯವಾಣಿ ಹಿರಿಯ ವರದಿಗಾರ ಲಕ್ಷ್ಮೀ ಮಚ್ಚಿನ ಸಂಪನ್ಮೂಲ ವ್ಯಕ್ತಿಯಾಗಿ ಪತ್ರಿಕೋದ್ಯಮದ ಬಗ್ಗೆ ಮಾಹಿತಿ
ನೀಡಲಿದ್ದು, ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ನಝೀರ್ ಪೂಲ್ಯ, ಬ್ರಹ್ಮಾವರ ತಾಲೂಕು ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.