


ಡೈಲಿ ವಾರ್ತೆ: 25/ಜುಲೈ/2025


ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನಲೆ ಕರಾವಳಿ ಭಾಗದ ಐದು ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಜು.26 ರಂದು ರಜೆ ಘೋಷಣೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜು.26 ರಂದು ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ಲಕ್ಷ್ಮೀ ಪ್ರಿಯಾ ರಜೆ ಘೋಷಿಸಿದ್ದಾರೆ.