


ಡೈಲಿ ವಾರ್ತೆ: 27/ಜುಲೈ/2025


ಅಂತಾರಾಷ್ಟ್ರೀಯ ಕ್ರೀಡಾಪಟು ಕುಂದಾಪುರ ಸತೀಶ್ ಖಾರ್ವಿ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

ಕುಂದಾಪುರ| ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮೆಯ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಅಂತರಾಷ್ಟ್ರೀಯ ಪವರ್ ಲಿಪ್ಟರ್ ಆಗಿರುವ ಸತೀಶ್ ಖಾರ್ವಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹಲವಾರು ಪದಕಗಳನ್ನು ಪಡೆದಿದ್ದಾರೆ. ಇವರ ಕ್ರೀಡಾ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ -2025 ನೀಡಿ ಗೌರವಿಸಲಾಗಿದೆ.