ಡೈಲಿ ವಾರ್ತೆ: 27/ಜುಲೈ/2025

ಟೇಕಾಫ್‌ ಆದ ಕೆಲಹೊತ್ತಲ್ಲೇ ಅಮೆರಿಕ ಏರ್‌ಲೈನ್ಸ್‌ ವಿಮಾನದಲ್ಲಿ ಬೆಂಕಿ

ವಾಷಿಂಗ್ಟನ್‌: ಅಮೆರಿಕ ಏರ್‌ಲೈನ್ಸ್‌ ವಿಮಾನವು ಟೇಕಾಫ್‌ ಆದ ಕೆಲಹೊತ್ತಿನಲ್ಲೇ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ತಕ್ಷಣ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಲಾಗಿದೆ.

ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್ಲೈನ್ಸ್ ವಿಮಾನದ ಎಡಭಾಗದ ಮುಖ್ಯ ಲ್ಯಾಂಡಿಂಗ್ ಗೇರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಮಿಯಾಮಿಗೆ ತೆರಳುತ್ತಿದ್ದ AA3023 ವಿಮಾನವು ಟೇಕಾಫ್‌ ಆದ ಸ್ವಲ್ಪ ಸಮಯದ ನಂತರ ರನ್‌ವೇಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿತು. ವಿಮಾನದ ಕೆಳಗೆ ಹೊಗೆ ಆವರಿಸಿದ್ದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತುರ್ತು ಸ್ಲೈಡ್‌ಗಳ ಮೂಲಕ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿ ಅಧಿಕಾರಿಗಳು ಮಾಡಿದ್ದಾರೆ. ವಿಮಾನದಲ್ಲಿ 173 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು. ಅವಘಡಕ್ಕೆ ನಿಖರವಾದ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಸ್ಥಳೀಯ ಸಮಯ ಮಧ್ಯಾಹ್ನ 2:45 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಮೆರಿಕನ್ ಏರ್ಲೈನ್ಸ್ ವಿಮಾನದ ಚಕ್ರಗಳಿಂದ ಜ್ವಾಲೆಗಳು ಹೊರಹೊಮ್ಮುತ್ತಿರುವ ಬಗ್ಗೆ DEN ಪ್ರಥಮ ಪ್ರತಿಕ್ರಿಯೆ ನೀಡುವವರು ಮತ್ತು ಡೆನ್ವರ್ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ತಕ್ಷಣ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು.
ದಟ್ಟ ಹೊಗೆಯ ನಡುವೆ ಪ್ರಯಾಣಿಕರು ರನ್‌ವೇಯಲ್ಲಿ ವಿಮಾನದಿಂದ ಇಳಿದು ಸುರಕ್ಷಿತ ಸ್ಥಳಕ್ಕೆ ಧಾವಿಸುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ತ್ವರಿತವಾಗಿ ನಂದಿಸುತ್ತಿದ್ದಾರೆ.

ವಿಮಾನವು ಟೇಕಾಫ್‌ ಆಗುವ ಸ್ವಲ್ಪ ಮೊದಲು ಲ್ಯಾಂಡಿಂಗ್ ಗೇರ್‌ ಟೈರ್‌ನಲ್ಲಿ ನಿರ್ವಹಣಾ ಸಮಸ್ಯೆಯನ್ನು ಅನುಭವಿಸಿದೆ ಎಂದು ಅಮೆರಿಕನ್ ಏರ್‌ಲೈನ್ಸ್ ತಿಳಿಸಿದೆ.