ಡೈಲಿ ವಾರ್ತೆ: 28/ಜುಲೈ/2025

ಧರ್ಮಸ್ಥಳ| ಸ್ನಾನಘಟ್ಟಕ್ಕೆ ಸ್ಥಳ ಮಹಜರಿಗೆ ಬಂದ SIT ತಂಡ – ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ ಆರಂಭ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ
ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ವ್ಯಕ್ತಿ ಜತೆಗೆ SIT ಅಧಿಕಾರಿಗಳು ಧರ್ಮಸ್ಥಳ ಸ್ನಾನಘಟ್ಟದ ಬಳಿ ಮಹಜರು ನಡೆಸುತ್ತಿದ್ದಾರೆ.

SIT ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್, ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.

ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್.ಎಲ್. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.