ಡೈಲಿ ವಾರ್ತೆ: 29/ಜುಲೈ/2025

ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜು ಹಾಗೂ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಚೇರ್ಕಾಡಿ ಬ್ರಹ್ಮಾವರ ಇವರ ಸಹಯೋಗದಲ್ಲಿ ಸಂಭ್ರಮದ ನಾಗರ ಪಂಚಮಿ

ಬ್ರಹ್ಮಾವರ: ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜು ಹಾಗೂ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಚೇರ್ಕಾಡಿ ಬ್ರಹ್ಮಾವರ ಇವರ ಸಹಯೋಗದಲ್ಲಿ ವರ್ಷದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾರಾವಿ ದಿನೇಶ್ ಹೆಗ್ಡೆ, ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಹಾಗೂ ಪದವಿ ಪೂರ್ವ ಕಾಲೇಜಿನ ಕರೆಸ್ಪಾಂಡೆಂಟ್ ಆಗಿರುವ ವಸಂತ್ ಕುಮಾರ್ ಎಂ ಎಸ್, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಹಾಗೂ ಪದವಿ ಪೂರ್ವ ಕಾಲೇಜಿನ ಸಂಚಲನ ಸಮಿತಿಯ ಅಧ್ಯಕ್ಷರಾಗಿರುವ ಸಾಧು ಸಾಲಿಯಾನ್, ಕಾರ್ಯದರ್ಶಿ ರಿಷಿ ರಾಜ್, ಸದಸ್ಯ ಮಿಥುನ್ ಕುಂದರ್, ರಾಷ್ಟ್ರೋತ್ಥಾನ ಪರಿಷತ್ತಿನ ಹಿತೈಷಿ ಸತೀಶ್ ಕುಂದರ್, ಪ್ರಾಂಶುಪಾಲರಾದ ಶ್ರೀಮತಿ ಭಾಗ್ಯಶ್ರೀ ಐತಾಳ್, ಆಡಳಿತ ಅಧಿಕಾರಿ ಸುರೇಶ್ ಹೆಜಮಾಡಿ, ಪದವಿ ಪೂರ್ವ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು.

ಪುರೋಹಿತರುಗಳಾದ ಪ್ರಸಾದ್ ದೇಶಪಾಂಡೆ ಹಾಗೂ ಗಣೇಶ್ ಇವರು ಪೂಜಾ ಕೈಂಕರ್ಯಯವನ್ನು ನೆರವೇರಿಸಿ ಕೊಟ್ಟರು.