


ಡೈಲಿ ವಾರ್ತೆ: 02/ಆಗಸ್ಟ್/ 2025


ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣ| ಮತ್ತೊಬ್ಬ ದೂರುದಾರ ಹಾಜರು!

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರಾದ ಜಯಂತ್ ಟಿ ಅವರು ತಾನು ನೋಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಾನು ಸುಮಾರು 15 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಬಾಲಕಿಯ ಮೃತದೇಹವನ್ನು ನೋಡಿದ್ದೇನೆ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆ ನಡೆಸದೆ ಮೃತದೇಹವನ್ನು ಹೂತು ಹಾಕಿರುವುದಾಗಿ ತನಗೆ ಸ್ಪಷ್ಟವಾದ ಮಾಹಿತಿಯಿದೆ. ಈ ಬಗ್ಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.