ಡೈಲಿ ವಾರ್ತೆ: 03/ಆಗಸ್ಟ್/ 2025

ವಕ್ವಾಡಿ: ಆಸರೆ ಟ್ರಸ್ಟ್ನಿಂದ ವಿದ್ಯಾರ್ಥಿ ವೇತನ, ಸಮವಸ್ತ್ರ ವಿತರಣೆ

ಕುಂದಾಪುರ: ಯಾವುದೇ ಪ್ರಚಾರದ ಫಲಪೇಕ್ಷೆಯಿಲ್ಲದೇ ಗ್ರಾಮದ ಒಳಿತಿಗಾಗಿ ತಾವು ದುಡಿಮೆ ಮಾಡಿದ ಒಂದು ಅಂಶವನ್ನು ಸಮಾಜದ ಅಭಿವೃದ್ಧಿಗೆ ನೀಡಿ ತಮ್ಮ ಗ್ರಾಮವನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸವನ್ನು ವಕ್ವಾಡಿ ಆಸರೆ ಸಂಸ್ಥೆ ಮಾಡುತ್ತಿದೆ.

ಈ ಸಂಸ್ಥೆಯು ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮನ್ನು ಕೊಡುಗೆಯಾಗಿ ನೀಡಿ ಮತ್ತಷ್ಟು ಆಸರೆಯ ಬೆಳಕನ್ನು ಸಮಾಜಕ್ಕೆ ಕಲ್ಪಿಸಲಿ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಆಸರೆ ಟ್ರಸ್ಟ್ ವಕ್ವಾಡಿ ಇವರ ನೇತೃತ್ವದಲ್ಲಿ ವಕ್ವಾಡಿಯ ಮಹಾಲಿಂಗೇಶ್ವರ ದೇವಸ್ಥಾನದ ಸಬಾಭವನದಲ್ಲಿ ಭಾನುವಾರ ಜರುಗಿದ 10ನೇ ತರಗತಿ ಮೇಲ್ಪಟ್ಟು ವಿವಿಧ ಪದವಿ ತನಕ ವಿದ್ಯಾಭ್ಯಾಸ ಮಾಡಿದ ವಿದ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ವಕ್ವಾಡಿಯ ಒಟ್ಟು 3 ಅಂಗನವಾಡಿ ಮಕ್ಕಳಿಗೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸರೆ ಟ್ರಸ್ಟ್ ವಕ್ವಾಡಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ ಮನೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ, ಧಾರ್ಮಿಕ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಸಹಾಯ ಧನ ವಿತರಿಸಿ ಶುಭ ಹಾರೈಸಿದರು.

ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ್ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಕಾಳಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿಗಾರ್, ಉಪನ್ಯಾಸಕ ಪಿ.ಕೆ.ಕೃಷ್ಣಮೂತರ್ಿ, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಬೀಜಾಡಿ ಉಪಸ್ಥಿತರಿದ್ದರು.

ಈ ಸಂದರ್ಭ ಸುಮಾರು 4 ಲಕ್ಷ ವೆಚ್ಚದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸ್ಥಳೀಯ ಅಂಗನವಾಡಿ ಮಕ್ಕಳಿಗೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ಟ್ರಸ್ಟಿನ ಸದಸ್ಯರಾದ ಕೋಟೇಶ್ವರ ರೋಟರಿ ಕ್ಲಬ್ ನೂತನ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕ ರಮೇಶ್ ಶೆಟ್ಟಿ ಪುರಾಣಿಬೈಲ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಟ್ರಸ್ಟ್ನ ಪ್ರಮುಖರಾದ ಕೀತರ್ಿ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕ ಮಾತನಾಡಿದರು. ಉದ್ಯಮಿ ಗಜೇಂದ್ರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿದರು. ಆನಂದ್ ಆಚಾರ್ಯ ವಕ್ವಾಡಿ ವಂದಿಸಿದರು.
……….