


ಡೈಲಿ ವಾರ್ತೆ: 03/ಆಗಸ್ಟ್/ 2025


ಸ. ಪ. ಪೂ. ಕಾಲೇಜು (ಪ್ರೌಢ ಶಾಲಾ ವಿಭಾಗ) ಮಣೂರು ಪಡುಕರೆಯ ವಿದ್ಯಾರ್ಥಿನಿ ಕು. ಮೈತ್ರಿ ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೋಟ: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕೆ ಪಿ ಎಸ್ ಬ್ರಹ್ಮಾವರ ಇವರ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಮಣೂರು ಪಡುಕರೆಯ ವಿದ್ಯಾರ್ಥಿನಿ ಕು. ಮೈತ್ರಿ ಇವಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ದೈಹಿಕ ಶಿಕ್ಷಣ ಶಿಕ್ಷಕ ತರಬೇತುದಾರರಾದ ಚಂದ್ರಶೇಖರ ಶೆಟ್ಟಿ ಅವರಿಂದ ತರಬೇತಿ ಪಡೆದಿರುತ್ತಾರೆ.
ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಹಾಗೂ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶಾಲಾಭಿವೃದ್ಧಿ ಸಮಿತಿ ಮಣೂರು ಪಡುಕರೆ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.