ಡೈಲಿ ವಾರ್ತೆ: 04/ಆಗಸ್ಟ್/ 2025

ಮಣಿಪಾಲ ಠಾಣೆ ಎದುರೇ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು!

ಮಣಿಪಾಲ: ಮಣಿಪಾಲದಿಂದ ಉಡುಪಿಯ ಕಡೆ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣಾ ಮುಂಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.

ಬೆಂಗಳೂರು ನೋಂದಾವಣೆ ಹೊಂದಿದ್ದು ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗಿದೆ. ಈ ಅಪಘಾತ ನಡೆದ ಕೂಡಲೇ ಆತ ಕಾರನ್ನು ಅಲ್ಲೇ ಬಿಟ್ಟು ಎಸ್ಕೆಪ್ ಆಗಿದ್ದಾನೆ.

ಕಾರು ಗುದ್ದಿದ ರಭಸಕ್ಕೆ ತಂತಿಗಳು ರಸ್ತೆಗೆ ಬಿದ್ದಿವೆ. ಕಾರಿನ ಮುಂಭಾಗ ಜಖಂಗೊಂಡಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು ಇನ್ನಷ್ಟೇ ದೂರು ದಾಖಲಾಗಬೇಕಿದೆ.