ಡೈಲಿ ವಾರ್ತೆ: 05/ಆಗಸ್ಟ್/ 2025

ಸಾರಿಗೆ ನೌಕರರ ಮುಷ್ಕರ: ಕೋಲಾರದಲ್ಲಿ ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಾಟ

ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದಾದ್ಯಂತ ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸುತ್ತಿದ್ದು, ರಾಜ್ಯದ ಹಲವೆಡೆ ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಸಂಚಾರ ಭಾಗಶಃ ಸ್ಥಗಿತಗೊಂಡಿದೆ.

ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾನೆಯಿಂದ ಕೋಲಾರದಲ್ಲಿ ಬಸ್ ನಿಲ್ದಾಣ ಸ್ತಬ್ದವಾಗಿತ್ತು. 10 ಗಂಟೆ ವೇಳೆಗೆ ಅಧಿಕಾರಿಗಳು ಒಂದೆರಡು ಬಸ್ಸುಗಳನ್ನು ನಿಲ್ದಾಣಕ್ಕೆ ಕಳುಹಿಸಿದ್ದಾರೆ. ಈ ವೇಳೆ ಕಿಡಿಗೇಡಿಯಿಂದ ಕಲ್ಲು ತೂರಾಟ ನಡೆದಿದ್ದು, ಬಸ್ಸಿನ ಕಿಟಿಕಿ ಗಾಜು ಪುಡಿಯಾಗಿದೆ.