ಡೈಲಿ ವಾರ್ತೆ: 06/ಆಗಸ್ಟ್/ 2025

ಕ್ರಾಸ್ ಲ್ಯಾಂಡ್ ಕಾಲೇಜು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪುನಃಶ್ಚತನ ಕಾರ್ಯಾಗಾರ –
ಸತತ ಪ್ರಯತ್ನದಿಂದ ಯಶಸ್ಸು: ರಂಜನಿ

ಬ್ರಹ್ಮಾವರ: ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ನಿರಂತರ ಅಧ್ಯಯನ ಮಾಡಬೇಕು. ಬದುಕಿನಲ್ಲಿ ಗುರಿ ಇಟ್ಟುಕೊಂಡು ಸತತ ಪ್ರಯತ್ನ ಮಾಡಿದರೆ ಯಶಸ್ಸು ಸಿಗುತ್ತದೆ ಎಂದು ನಿವೃತ್ತ ಶಿಕ್ಷಕಿ ಹಾಗೂ ಕ್ರಾಸ್‌ಲ್ಯಾಂಡ್ ಕಾಲೇಜಿನ ಹಳೆ ವಿದ್ಯಾರ್ಥಿನಿ ರಂಜನಿ ಎಸ್‌. ಹೇಳಿದರು.

ಇಲ್ಲಿನ ಕ್ರಾಸ್‌ಲ್ಯಾಂಡ್‌ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆದ ಪುನಃಶ್ವೇತನ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಪ್ರತಿ ವಿದ್ಯಾರ್ಥಿಯಲ್ಲಿ ಒಂದಲ್ಲ ಒಂದು ವಿಶೇಷ ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಗಳನ್ನು ಗುರುತಿಸಿ-ಕೊಳ್ಳಲು ಇಂತಹ ಪುನಃಶ್ವೇತನ

ಕಾರ್ಯಗಾರಗಳು ಉತ್ತಮ ವೇದಿಕೆಯಾಗಿವೆ. ಪಠ್ಯದೊಂದಿಗೆ ಪತ್ಯೇತರ ಚಟುವಟಿಕೆಗಳಲ್ಲಿಯೂ ಶಿಸ್ತಿನಿಂದ ಭಾಗವಹಿಸಬೇಕು ಎಂದು ಹೇಳಿದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಲತಾ ಆಚಾರ್ ಮಾತನಾಡಿ, ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಡಾ.ರಾಬರ್ಟ್ ಕೈವ್ ಜಿ. ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಬಿಜು ಜೇಕಬ್ ಭಾಗವಹಿಸಿದ್ದರು. ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರಾದ ಸುಕುಮಾರ್ ಶೆಟ್ಟಿಗಾರ ಎನ್‌ಎಸ್‌ಎಸ್, ದೀಪಾ ಕಿತ್ತೂರು ಅವರು ಶೈಕ್ಷಣಿಕ ವರ್ಷದಲ್ಲಿ ನಡೆಯುವ ವಿವಿಧ ಪಠ್ಯೇತರ ಚಟುವಟಿಕಗಳ ಬಗ್ಗೆ ಮಾಹಿತಿ ನೀಡಿದರು. ಹಳೆ ವಿದ್ಯಾರ್ಥಿನಿ‌ ಶ್ರೀಲತಾ ಕಾಲೇಜಿನ ಅನುಭವವನ್ನು ಹಂಚಿಕೊಂಡರು.

ವಿದ್ಯಾರ್ಥಿಗಳಾದ ಶಮಾ ಸ್ವಾಗತಿಸಿದರು. ನಿಧಿ ವಂದಿಸಿದರು. ಬರ್ನಿಸ್ ಲಿಲ್ಲಿ ನಿರೂಪಿಸಿದರು. ಉಪನ್ಯಾಸಕಿ ಅಶ್ವಿನಿ ಕಾರ್ಯಕ್ರಮ ಸಂಯೋಜಿಸಿದ್ದರು. ಅಂತಿಮ‌ ಬಿ.ಎ ವಿದ್ಯಾರ್ಥಿಗಳಾದ ಸೆರ್ಲಿನ್ ತಂಡ ಅಸ್ಸಾಂನ ವಿಶೇಷ ನೃತ್ಯ, ಮನೋಜ್ ಯಕ್ಷಗಾನದ ಮೂಲಕ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ರಂಜಿಸಿದರು.