


ಡೈಲಿ ವಾರ್ತೆ: 09/ಆಗಸ್ಟ್/ 2025


ಧರ್ಮಸ್ಥಳ ಹೆಣ ಹೂತ ಪ್ರಕರಣ: ಬಾಹುಬಲಿ ಬೆಟ್ಟದ ಬಳಿ SIT ಶೋಧ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಶನಿವಾರ ಶೋಧ ಕಾರ್ಯ ನಡೆಸುತ್ತಿದೆ.
ಸಾಕ್ಷಿ ದೂರುದಾರ ಧರ್ಮಸ್ಥಳದ ಗ್ರಾಮದ ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಅಗೆಯಲಾಗುತ್ತಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಎಸ್.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದಾರೆ.