ಡೈಲಿ ವಾರ್ತೆ: 10/ಆಗಸ್ಟ್/ 2025

ಉಚ್ಚಿಲ| ಬೈಕ್‌ ಢಿಕ್ಕಿಯಾಗಿ ಪಾದಚಾರಿ ಸಾವು – ಸವಾರರು ಗಂಭೀರ ಗಾಯ!

ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟು, ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಆ.9ರ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ಪಾದಚಾರಿ ಶಂಕರ್ ಶೆಟ್ಟಿ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಾದ ನತಾಷಾ ಮತ್ತು ದರ್ಶನ್ ರಾಜ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಉಚ್ಚಿಲ ಹಾಗೂ ಮೂಳೂರಿನ ಎಸ್.ಡಿ.ಪಿ.ಐ ಆ್ಯಂಬುಲೆನ್ಸ್‌ ಸಹಾಯದಿಂದ ಜಲಾಲುದ್ದೀನ್ ಜಲ್ಲು, ಕೆ.ಎಂ. ಸಿರಾಜ್, ಹಮೀದ್ ಆ್ಯಂಬುಲೆನ್ಸ್, ಹನೀಫ್ ಮೂಳೂರು, ಆಸಿಫ್ ಮೂಳೂರು ಹಾಗೂ ಕಲಂದರ್ ಮೂಳೂರು ಸೇರಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.