ಡೈಲಿ ವಾರ್ತೆ: 10/ಆಗಸ್ಟ್/ 2025

ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಸತತ ನಾಲ್ಕನೇ ಬಾರಿಗೆ ಮಣೂರು ಪಡುಕರೆಯ ದಿಗಂತ ಆರ್ ಪೂಜಾರಿ ಮತ್ತು ಎರಡನೇ ಬಾರಿಗೆ ಪ್ರಥಮ್ ಆರ್. ಆಯ್ಕೆ

ಕೋಟ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ವಾಸುದೇವ ಕೃಪಾ ಆಂಗ್ಲಮಾಧ್ಯಮ ಶಾಲೆ ಬೈಲೂರು ಸಂಯೋಜನೆಯಲ್ಲಿ ಮಾಹೆ ಮಣಿಪಾಲ ಇಲ್ಲಿಯ ಎಂ.ಐ.ಟಿ ಈಜುಕೊಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಈಜು ಸ್ಪರ್ದೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಮಣೂರು ಪಡುಕರೆಯ ದಿಗಂತ ಆರ್. ಪೂಜಾರಿ ಇವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ್ ಆರ್ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ 200ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಚಂದ್ರಶೇಖರ ಶೆಟ್ಟಿ ಇವರು ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾಸಾಧನೆಯನ್ನು ಗೀತಾನಂದ ಪೌಂಢೇಶನ್ ನ ಪ್ರವರ್ತಕರಾದ ಆನಂದ ಸಿ ಕುಂದರ್, ಅಧ್ಯಕ್ಷರು ಸರ್ವಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾ ಹಳೆವಿದ್ಯಾರ್ಥಿ ಸಂಘಟನೆ, ಮುಖ್ಯೋಪಾಧ್ಯಾಯರು , ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.