ಡೈಲಿ ವಾರ್ತೆ: 14/ಆಗಸ್ಟ್/ 2025

ಪ್ರಚೋದನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಎರಡು ಕಡೆ ಎಫ್ಐಆರ್

ಕಲಬುರಗಿ:ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹5 ಲಕ್ಷ ನೀಡುವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕ ಯತ್ನಾಳ ಹೇಳಿಕೆ ಒಂದು ಸಮುದಾಯವನ್ನು ಪ್ರಚೋದಿಸುವಂತಿದೆ. ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸುವಂತಿದೆ ಎಂದು ಆರೋಪಿಸಿ ಕಲಬುರಗಿಯ ಖಮರ್ ಕಾಲೊನಿಯ ಖದ್ಮತ್‌–ಎ–ಮಿಲ್ಲತ್ ಕಮಿಟಿಯ ಅಧ್ಯಕ್ಷ ಖಮರ್‌ ಜುನೈದ್‌ ಖುರೇಶಿ ಅವರು ದೂರು ನೀಡಿದ್ದರು ಎಂದು ಇಲ್ಲಿನ ರೋಜಾ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಕಲಂ 196, 299, 353(1)(c), 353(2)ಅಡಿ ಕೇಸ್ ದಾಖಲಾಗಿದೆ. ಒಂದು ಸಮುದಾಯವನ್ನು ವಿಭಜನೆ ದ್ವೇಷ ಹೇಳಿಕೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೈನುದ್ದೀನ್‌ ಬೀಳಗಿ ಅವರು ನಗರದ ಗಾಂಧಿಚೌಕಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ.