ಡೈಲಿ ವಾರ್ತೆ: 15/ಆಗಸ್ಟ್/ 2025

ಕೋಟತಟ್ಟು ಗ್ರಾ.ಪಂ. ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ – ಮಾನ್ಯ ಸಂಸದ ಕೋಟ ಅವರಿಂದ ಧ್ವಜಾರೋಹಣ

ಕೋಟ : 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾನ್ಯ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರ ಘನ ಉಪಸ್ಥಿತಿಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕುಂದರ್ ಬಾರಿಕೆರೆ ಅವರು ಧ್ವಜಾರೋಹಣ ನೆರವೇರಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ “ಸ್ವಾತಂತ್ರ್ಯದ ಹಾದಿ ಯನ್ನು ನೆನೆದರು ಹಾಗೂ ಆಪರೇಷನ್ ಸಿಂಧೂರದಂತ ಕಾರ್ಯಾಚರಣೆಯು ದೇಶ ಭಕ್ತಿಯನ್ನು ಎಲ್ಲರಲ್ಲಿ ಪುಟಿದೇಳುವಂತೆ ಮಾಡುತ್ತದೆ. ನಾವೆಲ್ಲರೂ ಒಂದೇ ಎಂದು ಸಾರಿದರು.

ಈ ಸಂಧರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸರಸ್ವತಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ಶ್ರೀಮತಿ ಕೆ ಸೀತಾ, ಶ್ರೀಮತಿ ಜ್ಯೋತಿ, ಶ್ರೀಮತಿ ಅಶ್ವಿನಿ, ಶ್ರೀಮತಿ ವಿದ್ಯಾ, ಶ್ರೀಮತಿ ಪೂಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಾರ್ಯದರ್ಶಿ ಶ್ರೀಮತಿ ಸುಮತಿ ಅಂಚನ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.