ಡೈಲಿ ವಾರ್ತೆ: 15/ಆಗಸ್ಟ್/ 2025

ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಸಂಭ್ರಮದ 79ನೇ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಬದ್ಧತೆಯನ್ನು ಅಳವಡಿಸಿಕೊಳ್ಳಿ – ಮಹೇಶ್ ಹೆಗ್ಡೆ

ಕುಂದಾಪುರ: ಇಲ್ಲಿನ ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಿಂಗ್ ಕಮಂಡರ್ ವಿ ರಾಮ್ ಪವಿತ್ರ ಅವರು ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ ನ ಅಧ್ಯಕ್ಷರಾದ ಎಂ.ಮಹೇಶ್ ಹೆಗ್ಡೆ ವಹಿಸಿದ್ದರು. ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬದ್ಧತೆಯನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಮುಂದಿನ ಜೀವನದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಬಹುದು.
ಇಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಟ್ಟಿಕೊಂಡು ಭವ್ಯ ರಾಷ್ಟ್ರವನ್ನು ಕಟ್ಟಲು ಮುಂದಾಗಬೇಕು. ಪ್ರತಿ ವಿದ್ಯಾರ್ಥಿಯು ದೇಶ ಮತ್ತು ತಮ್ಮ ಪೋಷಕರಿಗೆ ಆಸ್ತಿ ಆಗಬೇಕೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜಿನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿಂಗ್ ಕಮಂಡರ್ ವಿ ರಾಮ್ ಪವಿತ್ರ ಅವರು ಸನ್ಮಾನಿಸಿದರು.
ಹಾಗೂ ವಿಂಗ್ ಕಮಂಡರ್ ವಿ ರಾಮ್ ಪವಿತ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಹಾಗೂ ಹೈಸ್ಕೂಲಿನ ಮುಖ್ಯಶಿಕ್ಷಕಿಯಾದ ಸರೋಜಿನಿ ಪಿ ಆಚಾರ್ಯ ಅವರು ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಅಕ್ಷತಾ ಅವರು ಕಾರ್ಯಕ್ರಮವನ್ನು ಸ್ವಾಗತಿಸಿದರು.
ಶಿಕ್ಷಕರಾದ ರಸಿಕ್ ಮತ್ತು ಸಂದೀಪ್ ನಿರೂಪಿಸಿ, ಶಿಕ್ಷಕಿ ಶ್ರೀಮತಿ ರಕ್ಷಿತಾ ವಂದಿಸಿದರು.