


ಡೈಲಿ ವಾರ್ತೆ: 16/ಆಗಸ್ಟ್/ 2025


ಜಿಲ್ಲಾ ಉಸ್ತುವಾರಿ ಸಚಿವರಿಂದ ಗಂಗೆ ಕೊರಗ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ

ಉಡುಪಿ: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ನಡೆದ ಜಾಗ ಮತ್ತು ಮನೆ ಧ್ವಂಸ ಪ್ರಕರಣದ ಸಂತ್ರಸ್ಥೆ ಗಂಗೆ ಕೊರಗರವರ ಕುಟುಂಬಕ್ಕೆ ಪುನರ್ವಸತಿಗಾಗಿ ಹತ್ತು ಸೆಂಟ್ಸ್ ಜಾಗದ ಹಕ್ಕು ಪತ್ರ ಮತ್ತು ಮನೆ ಮಂಜೂರಾತಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ವಿತರಿಸಿದರು.
ಸಮಾರಂಭದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯಿತ್ ಸಿಇಒ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮುದಾಯದ ಬೆಂಬಲವಾಗಿ ಕೊರಗ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಒಕ್ಕೂಟದ ಸಂಯೋಜಕರಾದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೋಭಾ ನಾಡ ಮತ್ತು ಶುಭ ನಾಡ ಭಾಗವಹಿಸಿದ್ದರು.