


ಡೈಲಿ ವಾರ್ತೆ: 16/ಆಗಸ್ಟ್/ 2025


ಬುಡೋಳಿ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ : ಬುಡೋಳಿಯ ನುಸ್ರತುಲ್ ಇಸ್ಲಾಂ ಮದ್ರಸ ಹಾಗೂ ಸಮಸ್ತ ಮುಅಲ್ಲಿಂ ಸೆಂಟರ್ ನೇತೃತ್ವದಲ್ಲಿ
79ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಬುಡೋಳಿ ಮಸೀದಿ ಆವರಣದಲ್ಲಿ ನಡೆಸಲಾಯಿತು.

ಬುಡೋಳಿ ಗೌಸಿಯಾ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ತಮೀಮ್ ಅನ್ಸಾರಿ ಧ್ವಜಾರೋಹಣ ನೆರವೇರಿಸಿದರು.
ಪತ್ರಕರ್ತ ಶಂಶೀರ್ ಬುಡೋಳಿ, ಸ್ವಾತಂತ್ರ್ಯ ಹೋರಾಟಗಾರರ ಜೀವನ ನಮಗೆಲ್ಲರಿಗೂ ಮಾದರಿಯಾಗಿದ್ದು, ಅವರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಅಬೂಬಕ್ಕರ್ ಹಾಜಿ, ಸಿದ್ದೀಕ್, ಇಕ್ಬಾಲ್, ಅಝ್ಗರ್, ಮುಸ್ತಫಾ, ಜಬ್ಬಾರ್ ಹಾಗೂ ಮದ್ರಸಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.