


ಡೈಲಿ ವಾರ್ತೆ: 16/ಆಗಸ್ಟ್/ 2025


ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ : ಇವತ್ತು ನಾವು ಆಚರಿಸುತ್ತಿರುವ ಸ್ವಾತಂತ್ರ್ಯ ನಮ್ಮ ಹಲವು ಹಿರಿಯರ ಬಲಿದಾನದ ಫಲವಾಗಿದೆ. ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಿ ಪಡೆಯಲು ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭ ಬಾಯಿ ಪಟೇಲ್, ಮೌಲಾನ ಅಬ್ದುಲ್ ಕಲಾಂ ಆಜಾದ್, ಜವಾಹರ್ ಲಾಲ್ ನೆಹರು, ಅಶ್ಫಾಕುಲ್ಲಾ ಖಾನ್, ಅಬಿದ ಬೇಗಂ ಇವರೆಲ್ಲರ ಹೋರಾಟದ ಫಲವಾಗಿ ನಮಗೆ ಈ ಸ್ವಾತಂತ್ರ್ಯ ಲಭಿಸಿದೆ ಎಂದು ಮೆಲ್ಕಾರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ಇಂದಿನ ವಿದ್ಯಾರ್ಥಿಗಳು ಮತ್ತು ಯುವಜನತೆ ದೇಶದ ಅಭಿವೃದ್ಧಿಗಾಗಿ, ಉತ್ತಮ ಶಿಕ್ಷಣವನ್ನು ಪಡೆದು ಬಡತನ, ನಿರುದ್ಯೋಗ, ಅನಾರೋಗ್ಯ ಮುಂತಾದ ಸಮಸ್ಯೆಗಳಿಂದ ಪರಿಹಾರವನ್ನು ಕಂಡುಕೊಂಡು, ವೈಜ್ಞಾನಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಕೈಜೋಡಿಸಿ, ಜಾತಿ ಮತ ಭೇದಗಳನ್ನು ಮರೆತು ಸಹೋದರತೆಯಿಂದ ಇದ್ದು ಬಲಿಷ್ಠ ಭಾರತವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲೆ ಅಂಜಲಿನ ಸುನೀತ ಪಿರೇರಾ, ಮಮತಾ ರಾವ್, ವಿಜಯ, ಸೌಮ್ಯ, ಉಪನ್ಯಾಸಕ ವರ್ಗ ಮತ್ತು ಬೋಧಕೇತರ ವರ್ಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಸ್ವಾತಂತ್ರೋತ್ಸವದ ಪ್ರಯುಕ್ತ ಏರ್ಪಡಿಸಿದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿ ನಾಯಕಿ ಸುರಯ್ಯ ಸ್ವಾಗತಿಸಿ, ಉಪನ್ಯಾಸಕಿ ಎ. ಶಹನಾಝ್ ಪಾಣೆಮಂಗಳೂರು ವಂದಿಸಿದರು.