ಡೈಲಿ ವಾರ್ತೆ: 16/ಆಗಸ್ಟ್/ 2025

ಬಿ.ಸಿ.ರೋಡ್ : ಎಸ್ಡಿಪಿಐ ವತಿಯಿಂದ ತಿರಂಗ ರ್‍ಯಾಲಿ ಮತ್ತು ಸಾರ್ವಜನಿಕ ಸಭೆ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವದ ಭಾಗವಾಗಿ ‘ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ’ ಎಂಬ ಘೋಷಾವಾಕ್ಯದೊಂದಿಗೆ ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರ್ಯಕ್ಕಾಗಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ‌ ಸಭೆ ಬಿ.ಸಿ. ರೋಡ್ ನಲ್ಲಿ ನಡೆಯಿತು.

ಬಿ.ಸಿ ರೋಡ್ ಸರ್ಕಲ್ ನಿಂದ ಕೈಕಂಬ ಜಂಕ್ಷನ್ ವರೆಗೆ ನಡೆದ ತಿರಂಗಾ ರ್‍ಯಾಲಿಗೆ ಪಕ್ಷದ ರಾಜ್ಯಾಧ್ಯಕ್ಷ ಮಜೀದ್ ಮೈಸೂರು ಚಾಲನೆ ನೀಡಿದರು.

ಅನ್ವರ್ ಸಾದತ್ ಎಸ್ ಅವರಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ‌ ನೀಡಿದರು.

ಕೈಕಂಬ ಜಂಕ್ಷನ್ ನಲ್ಲಿ ನಡೆದ ಸಾರ್ವಜನಿಕ ಸಭೆಯ ಅಧ್ಯಕ್ಷತೆಯನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.

ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫಾನ್ಸೋ ಫ್ರಾಂಕೋ, ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಕ್ರೈಸ್ತ ಧರ್ಮಗುರು ಅಡ್ವಕೇಟ್ ಜೆರಾಲ್ಡ್ ಸಿಕ್ವೇರಾ ಮಡಿಕೇರಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್, ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಅಗ್ನಾಡಿ, ಅತಾವುಲ್ಲಾ ಜೋಕಟ್ಟೆ, ರಾಜ್ಯ ಸಮಿತಿ ಸದಸ್ಯೆ ಮಿಶ್ರಿಯಾ ಕಣ್ಣೂರು, ನಗರ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮೂನಿಶ್ ಅಲಿ, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಎಸ್.ಎಚ್, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಉಪಸ್ಥಿತರಿದ್ದರು.

ಇದೇ ವೇಳೆ ಪೇಪರ್ ಕ್ವಿಲ್ಲಿಂಗ್ ವಿಧಾನದಲ್ಲಿ ಇಸ್ಲಾಮಿಕ್ ಕ್ಯಾಲಿಗ್ರಫಿಯ ಮೂಲಕ ಅತಿದೊಡ್ಡ ಕಲಾಕೃತಿ ತಯಾರಿಸಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿರುವ ಗೋಳ್ತಮಜಲಿನ ಕಲಾವಿದ ಅಹ್ಮದ್ ಮಿಕ್ದಾದ್ ಅವರನ್ನು ಸನ್ಮಾನಿಸಲಾಯಿತು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಪುತ್ತೂರು ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.