


ಡೈಲಿ ವಾರ್ತೆ: 18/ಆಗಸ್ಟ್/ 2025


ಮುಖ್ಯಮಂತ್ರಿಗಳ ವಿರುದ್ಧ ಕೊಲೆ ಆರೋಪ:
ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಪರಮೇಶ್ವರ್ ಸೂಚನೆ!

ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್ ಸಂಜೆಯೊಳಗೆ ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು.
ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು. ಈ ವೇಳೆ ಅಧಿಕಾರಿಗಳು ಅದು 2023ರ ಮೇನಲ್ಲಿ ಮಾತನಾಡಿದ್ದ ವಿಡಿಯೋ ಅಂತ ಗೃಹ ಸಚಿವರ ಗಮನಕ್ಕೆ ತಂದರು.