ಡೈಲಿ ವಾರ್ತೆ: 18/ಆಗಸ್ಟ್/ 2025

ಉತ್ತರ ಕನ್ನಡ|ಭಾರಿ ಮಳೆ ಎಚ್ಚರಿಕೆ, ನಾಳೆ (ಆ.19) ರಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಕರ್ನಾಟಕದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಆಗಸ್ಟ್​ 24ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಮಂಗಳವಾರ (ಆ.19) ದಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ
ಜಿಲ್ಲೆಯ 11 ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.