ಡೈಲಿ ವಾರ್ತೆ: 19/ಆಗಸ್ಟ್/ 2025

ದ್ವೇಷ ಭಾಷಣ- ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲು

ಬ್ರಹ್ಮಾವರ: ಆರೆಸ್ಸೆಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣ:
ಧರ್ಮಸ್ಥಳ ಕ್ಷೇತ್ರದ ಮ್ಯಾಪ್‌ನ್ನು ಆಳವಡಿಸಿ ಅಲ್ಲಿರುವ ದೇವಸ್ಥಾನ ಮತ್ತು ಮಸೀದಿಗಳ ಬಗ್ಗೆ ಕೋಟ ವಸಂತ ಗಿಳಿಯಾ‌ರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿ ಧರ್ಮ -ಧರ್ಮಗಳ ಮಧ್ಯೆ ಎತ್ತಿಕಟ್ಟಿ ಕೋಮು ಗಲಭೆ ಸೃಷಿಸುವ ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡಿದ್ದು, ಇದೇ ಪೇಸ್‌ಬುಕ್ ಪೋಸ್ಟ್‌ನ್ನು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶರತ್‌ ಶೆಟ್ಟಿ, ವಡ್ಡರ್ಸೆ ಎಂಬುವರು ರೀ ಪೊಸ್ಟ್ ಮಾಡಿದ್ದು ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ 96(1)(a), 353(2) BNSರಂತೆ ಪ್ರಕರಣ ದಾಖಲಾಗಿದೆ.