


ಡೈಲಿ ವಾರ್ತೆ: 26/ಆಗಸ್ಟ್/ 2025


ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾದ ಡಾ. ಸತೀಶ್ ಖಾರ್ವಿಗೆ ಎಸ್ಪಿ ಹರಿರಾಂ ಶಂಕರ್ ಅವರಿಂದ ಅಭಿನಂದನೆ

ಕುಂದಾಪುರ: ಅಂತರಾಷ್ಟ್ರೀಯ ಕ್ರೀಡಾಪಟು ಕುಂದಾಪುರದ ಖಾರ್ವಿಕೇರಿ ನಿವಾಸಿ ಡಾ. ಸತೀಶ್ ಖಾರ್ವಿ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅಭಿನಂದಿಸಿದ್ದಾರೆ.
ಡಾ. ಸತೀಶ್ ಖಾರ್ವಿ ಅವರ ಪವರ್ ಲಿಫ್ಟಿಂಗ್ ಕ್ರೀಡಾ ಸಾಧನೆ ಮಾಡಿದ ಪದಕವನ್ನು ನೋಡಿ ಹಾಗೂ ಸೌತ್ ಆಫ್ರಿಕಾದಲ್ಲಿ ನಡೆಯುವ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ -2025 ಸ್ಪರ್ಧೆಗೆ ಆಯ್ಕೆಯಾಗಿರುವುದಕ್ಕೆ ಹರಿರಾಂ ಶಂಕರ್ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಮತ್ತು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆಯ ರಾಜ್ಯಾಧ್ಯಕ್ಷ ರಾಘವೇಂದ್ರ ಶೆಟ್ಟಿ ಜೊತೆಯಲ್ಲಿ ಅಭಿನಂದಿಸಿದರು.