


ಡೈಲಿ ವಾರ್ತೆ: 26/ಆಗಸ್ಟ್/ 2025


ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ ಖೋಖೋ ಪಂದ್ಯಾಟ

ಬ್ರಹ್ಮಾವರ: ತಾಲೂಕು ಮಟ್ಟದ ಖೋಖೋ ಪಂದ್ಯಾಟ
ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ ಆತಿಥ್ಯದಲ್ಲಿ ಬ್ರಹ್ಮಾವರ ತಾಲೂಕು ಮಟ್ಟದ 14ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ/ ಬಾಲಕಿಯರ ಖೋಖೋ ಪಂದ್ಯಾಟ ನಡೆಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುಕೇಶ್ ಮಡಿವಾಳ ವಹಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾದ ಶ್ರೀಮತಿ ಸರಸ್ವತಿ ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಯುತ ನಿತ್ಯಾನಂದ ಶೆಟ್ಟಿ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಕಿರಣ್ ಹೆಗ್ಡೆ ಖೋಖೋ ಅಂಕಣ ಉದ್ಘಾಟಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶಂಕರ್ ಸಾಲ್ಯಾನ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ
ಅಧ್ಯಕ್ಷರಾದ ಶ್ರೀಯುತ ಹರಿಜೀವನ್ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದಿಲೀಪ್ ಹೆಗ್ಡೆ, ಪ್ರಾಥಮಿಕ ಶಾಲಾ ಶಿಕ್ಷಕರ ಬ್ರಹ್ಮಾವರ ವಲಯ ಅಧ್ಯಕ್ಷರಾದಂತಹ ಪ್ರಶಾಂತ್ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ತಾಲೂಕು ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ಚಂದ್ರಶೇಖರ್, ಇಲಾಖಾ ಅಧಿಕಾರಿಗಳಾದ ಶ್ರೀಮತಿ ಪದ್ಮಾ ಹಾಗೂ ಶ್ರೀಯುತ ಸುರೇಶ್ ನಾಯ್ಕ್ ಉಪಸ್ಥಿತರಿದ್ದರು.

ಶಿಕ್ಷಕರಾದ ಶ್ರೀಮತಿ ಜ್ಯೋತಿಕಲಾ ವಂದನಾರ್ಪಣೆಗೈದರು.
ದೈಹಿಕ ಶಿಕ್ಷಕರಾದ ಶ್ರಿಯುತ ಗಣೇಶ್ ಹಾಗೂ ಶಿಕ್ಷಕಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು.

ಪಂದ್ಯದ ಮುಕ್ತಾಯದ ನಂತರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಕುಕ್ಕೆಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ ಹೆಬ್ಬಾರ್, ಉದ್ಯಮಿ ಸುನೀಲ್ ಶೆಟ್ಟಿ ಒಳಮಡಿ, ಪ್ರಜನ್ ಹೆಗ್ಡೆ, ಗುಣಾಕರ ಹೆಗ್ಡೆ ಮೊದಲಾದ ಗಣ್ಯರ ಸಮ್ಮುಖದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಸುಮಾರು 38 ತಂಡಗಳು ಭಾಗವಹಿಸಿದ್ದು ಬಾಲಕರ ತಂಡದಲ್ಲಿ ಪ್ರಥಮ ಸ್ಥಾನವನ್ನು ವಿ.ಜೆ.ಸಿ ಕೋಟ ಹಾಗೂ ಪೆರ್ಡೂರು ಪ್ರೌಢಶಾಲೆ ಪೆರ್ಡೂರು ದ್ವಿತೀಯ ಸ್ಥಾನ ಪಡೆಯಿತು.ಹಾಗೂ ಬಾಲಕಿಯರ ತಂಡದಲ್ಲಿ ಕಾರ್ಕಡ ಸಾಲಿಗ್ರಾಮ ಪ್ರಥಮ ಸ್ಥಾನವನ್ನು ಪಡೆದರೆ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ದ್ವಿತೀಯ ಸ್ಥಾನವನ್ನು ಪಡೆಯಿತು.


ಪಂದ್ಯಾಟವು ಸ್ಥಳೀಯ ಗ್ರಾಮ ಪಂಚಾಯತ್, ಊರ ದಾನಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು SDMCಯ ಅಧ್ಯಕ್ಷರು ,ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಅಧ್ಯಾಪಕ ವೃಂದದವರ ಸಹಕಾರದಲ್ಲಿ ಯಶಸ್ವಿಯಾಗಿ ನೆರವೇರಿತು.