ಡೈಲಿ ವಾರ್ತೆ: 26/ಆಗಸ್ಟ್/ 2025

ಕೈಲ್ಕೆರೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಮೊಳಹಳ್ಳಿ: ಶಾಲಾ ವಿದ್ಯಾರ್ಥಿಗಳ ಕಲಿಕೆಯ ಜತೆಗೆ ಕ್ರೀಡೆಗೂ ಕೂಡಾ ಆದ್ಯತೆ ನೀಡಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳ ಆಯೋಜನೆಗೆ ಸರಕಾರ ಸಮರ್ಪಕವಾಗಿ ಅನುದಾನ ಬಿಡುಗಡೆಯಾಗಬೇಕು ಎಂದು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ಪ್ರವರ್ತಕ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಹೇಳಿದರು.

ಅವರು ಆ.25 ರಂದು ಸ. ಕಿ. ಪ್ರಾಥಮಿಕ ಶಾಲೆ ಕೈಲ್ಕೆರೆಯಲ್ಲಿ ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೈಲೆರೆ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಸ್ಮಾಶ್ ಇಟ್ ಉದ್ಘಾಟಿಸಿ ಮಾತನಾಡಿದರು.

ಮೊಳಹಳ್ಳಿ ಗ್ರಾ. ಪಂ. ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ದ್ಯಾವಲಬೆಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ. ಉಪಾಧ್ಯಕ್ಷೆ ಚೈತ್ರಾ ವಿ. ಅಡಪ, ಪ್ರಥಮದರ್ಜೆ ಗುತ್ತಿಗೆದಾರರಾದ ಪ್ರತಾಪ್‌ ಚಂದ್ರ ಹೆಗ್ಡೆ, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ವಾಣಿ ಆ‌ರ್.ಶೆಟ್ಟಿ ಎಸ್ ಡಿಎಂಸಿ ಅಧ್ಯಕ್ಷ ಉದಯ ಕೊಠಾರಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ
ಸತ್ಯನಾರಾಯಣ, ನಾಗರಾಜ್ ಮಂಜ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹಾಲಾಡಿ ವೃತ್ತದ ಶಿಕ್ಷಣ ಸಂಯೋಜಕ ಶೇಖರ್ ಯು., ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಇದರ ಜಿಲ್ಲಾಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣಶೆಟ್ಟಿ, ಅಶೋಕ್‌ ಮಾವಿನಕಟ್ಟೆ ಹಿರಿಯ ನಾಗರಿಕ ಕೃಷ್ಣ ನಾಯ್ಕ ಬಿಆರ್‌ಪಿ ಸುಕನ್ಯಾ, ಸಿಆರ್‌ಪಿ ವಡ್ಡರ್ಸೆ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ಆಕರ್ಷಕ ಸ್ವಾಗತ ನೃತ್ಯಗಳು ಪ್ರದರ್ಶನಗೊಂಡಿತು. ಶಾಲಾ ಮುಖ್ಯೋಪಾಧ್ಯಾಯ ವಡ್ಡರ್ಸೆ ಸಂತೋಷ ಶೆಟ್ಟಿ ಸ್ವಾಗತಿಸಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಸ್ತಾವನೆಗೈದು,
ಶಿಕ್ಷಕ ಗಣೇಶ್ ಶೆಟ್ಟಿ ಮೊಳಹಳ್ಳಿ ನಿರೂಪಿಸಿ, ಶಿಕ್ಷಕಿ ಮಂಜುಳಾ ವಂದಿಸಿದರು.