



ಡೈಲಿ ವಾರ್ತೆ: 27/ಆಗಸ್ಟ್/ 2025


ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ,
30 ಜನರ ಸಾವು, ತೀರ್ಥಯಾತ್ರೆ ಮುಂದೂಡಿಕೆ

ಜಮ್ಮು: ಜಮ್ಮುವಿನಲ್ಲಿ ಮಳೆ ಭಾರೀ ಅನಾಹುತ ಸೃಷ್ಟಿಸಿದೆ. ಮಂಗಳವಾರ ಸುರಿದ ರಣಭೀಕರ ಮಳೆಗೆ ಭೂಕುಸಿ, ಮನೆ, ಸೇತುವೆ ಕೊಚ್ಚಿ ಹೋದ ಘಟನೆ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿದ್ದರೆ.
ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದ್ದು. ವೈಷ್ಣೋದೇವಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಣ ಮಳೆ ಕೇವಲ ಜಮ್ಮು ಅಷ್ಟೇ ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿಯೂ ಹಾನಿಯನ್ನುಂಟು ಮಾಡಿದೆ. ಇಲ್ಲಿನ ಸೇತುವೆಗಳು ಕುಸಿದು ಬಿದ್ದಿದ್ದು, ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಮೂಲಸೌಕರ್ಯ ತೀವ್ರವಾಗಿ ಹಾನಿಗೊಳಗಾಗಿದೆ ಎಂದು ತಿಳಇದುಬಂದಿದೆ.
ಜಮ್ಮು-ಶ್ರೀನಗರ ಮತ್ತು ಕಿಶ್ತ್ವಾರ್-ದೋಡಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ, ಭೂಕುಸಿತ, ಹಠಾತ್ ಪ್ರವಾಹದಿಂದ ರಸ್ತೆಗಳ ಸಂಚಾರದ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಅಲ್ಲದೆ, ಜಮ್ಮುವಿಗೆ ಹೋಗುವ ಮತ್ತು ಅಲ್ಲಿಂದ ಬರುವ ಅನೇಕ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.