ಡೈಲಿ ವಾರ್ತೆ: 28//ಆಗಸ್ಟ್/ 2025

ಬಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಆ.28) ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 28ರಂದು ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ. ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಆದೇಶ ಹೊರಡಿಸಿದ್ದಾರೆ.