


ಡೈಲಿ ವಾರ್ತೆ: 30/ಆಗಸ್ಟ್/ 2025


ಎಕ್ಸಲೆಂಟ್ ಕುಂದಾಪುರ: ಶಟಲ್ ಬ್ಯಾಡ್ಮಿಂಟನ್ ದಿಯಾ ನಾಯರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್ ಜಂಟಿಯಾಗಿ ದಿನಾಂಕ ಆ.29 ರಂದು ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ನಮ್ಮ ಕಾಲೇಜಿನ ಹೆಮ್ಮೆಯ ಶಟಲ್ ಬ್ಯಾಡ್ಮಿಂಟನ್ ಪಟುವಾದ ದಿಯಾ ನಾಯರ್‌ರವರು ಜಿಲ್ಲಾ ಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ಮುಂದಿನ ರಾಜ್ಯ ಮಟ್ಟದಲ್ಲಿ ನಡೆಯುವ ಶಟಲ್ ಬ್ಯಾಡ್ಮಿಂಟನ್‌ಗೆ ಆಯ್ಕೆಗೊಂಡಿರುವುದು ಹೆಮ್ಮೆಯ ವಿಷಯವಾಗಿದೆ.
ಈ ಸಾಧನೆಗೈದ ವಿದ್ಯಾರ್ಥಿನಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಶಿಕ್ಷಕ – ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಈ ಅದ್ಬುತ ಸಾಧನೆಯೊಂದಿಗೆ ರಾಜ್ಯಮಟ್ಟದಲ್ಲೂ ವಿಜೇತಳಾಗಿ ರಾಷ್ಟ್ರೀಯ ತಂಡಕ್ಕೆ ಪ್ರತಿನಿಧಿಸುವಂತಾಗಲಿ ಎಂದು ಶುಭ ಹಾರೈಸಿದರು.