ಡೈಲಿ ವಾರ್ತೆ: 01/ಸೆ./2025

ಬ್ರಹ್ಮಾವರ: ತಾಯಿ ಮತ್ತು ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಬ್ರಹ್ಮಾವರ: ತಾಯಿ ಮತ್ತು ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತಾಯಿ ಸುಷ್ಮೀತಾ (23) ಹಾಗೂ ಮಗು ಶ್ರೇಷ್ಠ (1ವರ್ಷ 6 ತಿಂಗಳು) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ.

ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದು
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.

ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.