ಡೈಲಿ ವಾರ್ತೆ: 02/ಸೆ./2025

ಕುಂದಾಪುರ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸನ್ವಿತ್ ಕುಸ್ತಿ ಪಂದ್ಯಾಟದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ವಿತ್. G. ಖಾರ್ವಿ 60 ಕೆಜಿ ವಿಭಾಗದ ಗ್ರೀಕೋ ರೋಮನ್ ಕುಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಬಸ್ರೂರಿನ ಮಾಜಿ ಯೋಧ ಗಣಪತಿ ಖಾರ್ವಿ ಹಾಗೂ ಸುನಿತಾ ಖಾರ್ವಿ ಅವರ ಪುತ್ರರಾಗಿರುತ್ತಾರೆ