ಡೈಲಿ ವಾರ್ತೆ: 03/ಸೆ./2025

ಗಣೇಶ ವಿಸರ್ಜನೆ ವೇಳೆ ಅವಘಡ: ವಿದ್ಯುತ್ ತಂತಿ ಮೇಲೆತ್ತುವಾಗ ಶಾಕ್ ಬಡಿದು ಯುವಕ ಸಾವು

ವಿಜಯಪುರ: ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಬಡಿದು ಯುವಕ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವಿಜಯಪುರ ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಎಲ್ಲ ಗಣೇಶನ ಮೂರ್ತಿಗಳನ್ನು ಕಳುಹಿಸಿದ ಪೊಲೀಸರು, ಸ್ಥಳದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ಡಿವೈಎಸ್​​ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ನಿಂತು ಇತರ ಗಣೇಶ ವಿಸರ್ಜನೆ ಮೆರವಣಿಗೆಗಳಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ.