


ಡೈಲಿ ವಾರ್ತೆ: 03/ಸೆ./2025


ಮಡಿಕೇರಿ: ಕಾರು ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ – ಮಹಿಳೆ ಮೃತ್ಯು, ಇಬ್ಬರಿಗೆ ಗಾಯ

ಮಡಿಕೇರಿ: ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪ ಕಡೆಪಾಲ
ಬಳಿ ನಡೆದಿದೆ.
ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಶೋಭಾ(45) ಮೃತ ದುರ್ದೈವಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಶೋಭಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಕಾರು ಚಲಾಯಿಸುತ್ತಿದ್ದ ದೇವಯ್ಯ(54) ಹಾಗೂ ಪ್ರಯಾಣಿಕರಾದ ವನಜಾಕ್ಷಿ(44) ಅವರು ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ನಡುವೆ ತಿರುವು ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.