ಡೈಲಿ ವಾರ್ತೆ: 11/ಸೆ./2025

ಕುಂದಾಪುರ| ಚಲಿಸುವ ರೈಲಿನಡಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಕುಂದಾಪುರ : ಅಪರಿಚಿತ ವ್ಯಕ್ತಿಯೋರ್ವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳವರ ಬ್ರಿಡ್ಜ್ ಕೆಳಗಡೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ವ್ಯಕ್ತಿ ಎಂದು ತಿಳಿದುಬಂದಿದೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಸ್ಐ ಲಕ್ಷ್ಮಣ್ ಪೂಜಾರಿ, ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ, ಆರ್ ಪಿ ಎಫ್ ಸಿಬ್ಬಂದಿ ಸುಧೀರ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು. ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.