ಡೈಲಿ ವಾರ್ತೆ: 14/ಸೆ./2025

ವಾಲಿಬಾಲ್ ಪಂದ್ಯಾಟ: ಎಕ್ಸಲೆಂಟ್‌ನ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ ಸೆ. 13 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇವರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಾಲಿಬಾಲ್ ಪ್ರತಿಭೆಗಳಾದ ದೇವಿಪ್ರಸಾದ್ ಮತ್ತು ಆರ್ಯನ್ ಹೆಚ್.ಎ ರವರು ತಾಲೂಕು ತಂಡದ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ.

ಈ ನಮ್ಮ ಸಂಸ್ಥೆಯ ಹೆಮ್ಮೆಯ ವಾಲಿಬಾಲ್ ಆಟಗಾರರಾದ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುವುದರ ಜೊತೆಗೆ ಜಿಲ್ಲಾಮಟ್ಟದಲ್ಲಿಯೂ ಸಾಧನೆಯನ್ನು ಮಾಡಿ ಆಯ್ಕೆಗೊಳ್ಳುವಂತೆ ಹಾರೈಸಿದ್ದಾರೆ.