


ಡೈಲಿ ವಾರ್ತೆ: 17/ಸೆ./2025


ಉಡುಪಿಯಲ್ಲಿ ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಸಾಗಾಟ, ಆರೋಪಿ ಬಂಧನ

ಉಡುಪಿ: ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಹಾಗೂ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್. ವಿ ಬಡಿಗೇರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಇಕ್ಬಾಲ್ (33) ಬಂಧಿತ ಆರೋಪಿ.
ಆರೋಪಿ ಮೂಡನಿಡಂಬೂರು ಗ್ರಾಮದ ಗರಡಿ ರಸ್ತೆಯಲ್ಲಿ ಸ್ಕೂಟಿಯಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 172/2025 ಕಲಂ NARCOTIC DRUGS & PSYCHOTROPIC SUBSTANCES ACT, 1985 (U/s-8(C) 20(b)(II)(A) ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.