


ಡೈಲಿ ವಾರ್ತೆ: 18/ಸೆ./2025


ವಾಲಿಬಾಲ್ ಪಂದ್ಯಾಟ: ಎಕ್ಸಲೆಂಟ್ ವಿದ್ಯಾರ್ಥಿ ಆರ್ಯನ್ ಹೆಚ್.ಎ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕೃತಿಕ, ಪ್ರತಿಭಾ ಕಾರಂಜಿ ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ.
ಅಂತಹ ಸಾಧನೆಗಳ ಹಾದಿಯ ದಾಖಲೆಗಳ ಸರಮಾಲೆಗಳ ಗರಿಯತ್ತ ಸಾಗುತ್ತಾ, ದಿನಾಂಕ 17-09-2025ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ನಡೆಸಿದ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಾಲಿಬಾಲ್ ಪ್ರತಿಭೆಯಾದ ಆರ್ಯನ್ ಹೆಚ್.ಎ ರವರು ಜಿಲ್ಲಾ ತಂಡದ ಅತ್ಯುತ್ತಮ ಆಟಗಾರ ಹಾಗೂ ಜಿಲ್ಲಾ ತಂಡದ ಅತ್ಯುತ್ತಮ ಲಿಬ್ರೋ ಆಟಗಾರರಾಗಿ ಹೊರಹೊಮ್ಮಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆ ಹಾಗೂ ಸಂತಸದ ವಿಷಯವಾಗಿದೆ.
ಈ ನಮ್ಮ ಸಂಸ್ಥೆಯ ಹೆಮ್ಮೆಯ ವಾಲಿಬಾಲ್ ಆಟಗಾರರಾದ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುವುದರ ಜೊತೆಗೆ ರಾಜ್ಯಮಟ್ಟದಲ್ಲಿಯೂ ಸಾಧನೆಯನ್ನು ಮಾಡಿ ಆಯ್ಕೆಗೊಳ್ಳುವಂತೆ ಹಾರೈಸಿದ್ದಾರೆ.