
ಡೈಲಿ ವಾರ್ತೆ: 20/ಸೆ./2025
ಎಣ್ಣೆ ಪಾರ್ಟಿಯಲ್ಲಿ ಕಿರಿಕ್:
ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!

ಕಲಬುರಗಿ: ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಕುಷ್ಟರೋಗಿಗಳ ಕಾಲೋನಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಚಾಂದ್‌ಸಾಬ್ ಕೊಲೆಯಾದ ದುರ್ದೈವಿ.
ಶುಕ್ರವಾರ ರಾತ್ರಿ ಚಾಂದ್‌ಸಾಬ್ ಮನೆಯಲ್ಲೇ ಪರಿಚಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವೇಳೆ ಗಲಾಟೆ ನಡೆದು ಚಾಂದ್‌ಸಾಬ್‌ನನ್ನು ಬೆತ್ತಲೆ ಮಾಡಿ ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತರ ಪತ್ನಿ ದೆಹಲಿಯಲ್ಲಿ ವಾಸವಿದ್ದು, ಪತಿಯ ಸಾವಿನ ಬಗ್ಗೆ ತಿಳಿದು ಕಲಬುರಗಿಯತ್ತ ಆಗಮಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.