ಡೈಲಿ ವಾರ್ತೆ: 24/ಸೆ./2025

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ ಎ ಗಫೂರ್, ನಾರಾಯಣ ಗುರು ಪ್ರಾಧಿಕಾರಕ್ಕೆ ಮಂಜುನಾಥ ಪೂಜಾರಿ ನೇಮಕ

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಎಂ. ಎ. ಗಫೂ‌ರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಸ್ಕ‌ರ್ ಫೆರ್ನಾಂಡಿಸ್ ಅವರ ನಿಕಟವರ್ತಿಯಾಗಿದ್ದ ಎಂ. ಎ. ಗಫೂ‌ರ್ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ .ಅಲ್ಲದೆ ಕೆಪಿಸಿಸಿ ಕಾರ್ಯದರ್ಶಿಯಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.

ಆಸ್ಕ‌ರ್ ಫರ್ನಾಂಡಿಸ್ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಎಂ ಎ ಗಪೂರ್ ಹಲವು ಬಾರಿ ರಾಜಕೀಯ ಅಧಿಕಾರದಿಂದ ವಂಚಿತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಅವರು ಎಂಎಲ್ಸಿ ಆಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಕೊನೆ ಗಳಿಗೆಯಲ್ಲಿ ಅವಕಾಶ ವಂಚಿತರಾಗುತ್ತಿದ್ದರು.