
ಡೈಲಿ ವಾರ್ತೆ: 29/ಸೆ./2025
ಪಾಕಿಸ್ತಾನವನ್ನು ಮಣಿಸಿ 9ನೇ ಬಾರಿಗೆ ಏಷ್ಯಾಕಪ್ ಎತ್ತಿಹಿಡಿದ ಟೀಂ ಇಂಡಿಯಾ

ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ.

41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.