ಡೈಲಿ ವಾರ್ತೆ: 07/ಅ./2025

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ದೇವೇಗೌಡರಿಗೆ ಏನಾಗಿದೆ ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಗಳಿವೆ.