ಡೈಲಿ ವಾರ್ತೆ: 09/ಅ./2025

ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ಅವಘಡ: 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.

ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ.
ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಶಾಲಾ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರಲ್ಲಿ ಬಾಲಕ ದುರದೃಷ್ಟವಶಾತ್ ಸಜೀವ ದಹನವಾಗಿದ್ದಾನೆ.

ಅಗ್ನಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಯತ್ನಿಸಿದರೂ, ಪುಷ್ಪಕ್ ಆ ಸಮಯದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.