ಡೈಲಿ ವಾರ್ತೆ: 10/ಅ./2025

ಸಿಮೆಂಟ್ ತುಂಬಿದ ಲಾರಿ, ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು, ಹಲವರಿಗೆ ಗಂಭೀರ ಗಾಯ

ಮೈಸೂರು: ಮೈಸೂರಿನಿಂದ ಹುಣಸೂರಿನ ಕಡೆಗೆ ಬರುತ್ತಿದ್ದ ಸಿಮೆಂಟ್ ತುಂಬಿದ ಲಾರಿ ಹಾಗೂ ಕೇರಳದ ಕೊಲ್ಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಮದುಗಿರಿ ಕೊಪ್ಪಳ್ ಗೇಟ್ ಬಳಿ ಅ.10 ರಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಬಸ್ ಚಾಲಕ ಮಹೇಶ್ (35) ಮತ್ತು ಕ್ಲಿನರ್ ರಾಜೇಶ್ (28) ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ಮೃತಪಟ್ಟಿದ್ದಾರೆ. ಗಾಯಗೊಂಡ 25ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವು ಗಾಯಾಳುಗಳನ್ನು ಮೈಸೂರು ಜಿಲ್ಲಾ ಆಸ್ಪತ್ರೆಗೂ ರವಾನಿಸಲಾಗಿದೆ.

ಕೇರಳದ ಕೊಲ್ಲಂನಿಂದ 45 ಮಂದಿ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಪಿಆರ್ ಟ್ರಾವೆಲ್ಸ್‌ನ ಖಾಸಗಿ ಬಸ್‌ಗೆ ಮೈಸೂರಿನಿಂದ ಸಿಮೆಂಟ್ ತುಂಬಿದ ಲಾರಿಯೊಂದಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ತಪ್ಪಿನಿಂದ ಮಾರ್ಗ ಬದಲಾಯಿಸಿದ್ದು, ಇದರಿಂದ ಡಿಕ್ಕಿ ತೀವ್ರಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಹುಣಸೂರು ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.